ಇದೇ ವಿಷಯವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಖಡಕ್ ವಾರ್ನಿಂಗ್ ನೀಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸೋತಿರುವ ಮತ್ತು ಬಣಗಳಿಂದ ತುಂಬಿರುವ ವಿರೋಧ ಪಕ್ಷ ಬಿಜೆಪಿಯ ರಾಜ್ಯ ಘಟಕವು, ಕೆಲವು ಮಾಧ್ಯಮಗಳೊಂದಿಗೆ ಶಾಮೀಲಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ದುರ್ಬಲಗೊಳಿಸಲು ದುರುದ್ದೇಶಪೂರಿತ ಪ್ರಚಾರವನ್ನು ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.