ಫೈನಲ್‌ನಲ್ಲಿ ಆರ್‌ಸಿಬಿಗೆ ಮೊದಲ ಜಯ; ಟಾಸ್ ಗೆದ್ದು ಗುಜರಾತ್ ಟೈಟನ್ಸ್ ಪಡೆಯನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ ಬೆಂಗಳೂರು! | IPL 2026 Final

IPL 2026 Final
IPL 2026 Final
Published on
IPL 2026 Final: 19ನೇ ಐಪಿಎಲ್​ನ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ವಿಶ್ವದ ಕ್ರಿಕೆಟ್ ಪ್ರೇಮಿಗಳ ಕಣ್ಣು ಈಗ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದತ್ತ ನೆಟ್ಟಿದೆ. ಭಾನುವಾರ ನಡೆಯುತ್ತಿರುವ ಈ ಬ್ಲಾಕ್‌ಬಸ್ಟರ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟೀದಾರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ.

ಬ್ಯಾಕ್-ಟು-ಬ್ಯಾಕ್ ಪ್ರಶಸ್ತಿಯತ್ತ ಆರ್‌ಸಿಬಿ ಚಿತ್ತ

ಹಾಲಿ ಚಾಂಪಿಯನ್ ಆಗಿರುವ ಆರ್‌ಸಿಬಿ, ರಜತ್ ಪಾಟೀದಾರ್ ನೇತೃತ್ವದಲ್ಲಿ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿಹಿಡಿಯುವ ತವಕದಲ್ಲಿದೆ. ಮತ್ತೊಂದೆಡೆ, ಕಳೆದ ಐದು ಸೀಸನ್‌ಗಳಲ್ಲಿ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ಭರ್ಜರಿ ಪೈಪೋಟಿ ನೀಡಲು ಸಿದ್ಧವಾಗಿದೆ. ಮೊದಲ ಬಾರಿಗೆ ಫೈನಲ್‌ನಲ್ಲಿ ಮುನ್ನಡೆಸುತ್ತಿರುವ ನಾಯಕ ಗಿಲ್ ಹಾಗೂ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಪ್ರದರ್ಶನದ ಮೇಲೆ ಜಿಟಿಯ ಗೆಲುವಿನ ಭವಿಷ್ಯ ನಿಂತಿದೆ.

ಉಭಯ ತಂಡಗಳು ತಮ್ಮ ಎರಡನೇ ಐಪಿಎಲ್ ಪ್ರಶಸ್ತಿಗಾಗಿ ಕಾದಾಡುತ್ತಿದ್ದು, ಗೆದ್ದ ಮಹಾ ಚಾಂಪಿಯನ್‌ಗೆ ಬರೋಬ್ಬರಿ ರೂ. 20 ಕೋಟಿ ಬಹುಮಾನದ ಮೊತ್ತ ಸಿಗಲಿದೆ. ಕೋಟಿ ಕೋಟಿ ಅಭಿಮಾನಿಗಳ ಧ್ವನಿ, ತೀವ್ರ ಜಿದ್ದಾಜಿದ್ದಿನ ನಡುವೆ ಈ ಮಹಾ ಕದನ ಯಾರ ಪಾಲಾಗಲಿದೆ ಎಂಬ ಕುತೂಹಲ ಗಗನಕ್ಕೇರಿದೆ(ಏಜೆನ್ಸೀಸ್​).

ಆರ್‌ಸಿಬಿ

ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್ (ನಾಯಕ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೇಕಬ್ ಡಫಿ, ಜೋಶ್ ಹ್ಯಾಜಲ್‌ವುಡ್, ರಸಿಖ್ ಸಲಾಮ್ ದಾರ್.

ಗುಜರಾತ್ ಟೈಟನ್ಸ್

ಶುಭಮನ್ ಗಿಲ್ [ನಾಯಕ], ಸಾಯಿ ಸುದರ್ಶನ್, ಜೋಸ್ ಬಟ್ಲರ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ನಿಶಾಂತ್ ಸಿಂಧು, ಜೇಸನ್ ಹೋಲ್ಡರ್, ರಶೀದ್ ಖಾನ್, ಕಗಿಸೊ ರಬಾಡ, ಅರ್ಷದ್ ಖಾನ್, ಮೊಹಮ್ಮದ್ ಸಿರಾಜ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net