Reels Craze : ನಾವಿಂದು ಸಾಮಾಜಿಕ ಜಾಲತಾಣ ಯುಗದಲ್ಲಿ ಬದುಕುತ್ತಿದ್ದೇವೆ. ಇದು ಹೇಗಿದೆ ಅಂದರೆ, ಒಂದು ಹೊತ್ತು ಊಟವಿಲ್ಲದಿದ್ದರೂ ಪರವಾಗಿಲ್ಲ ಆದರೆ, ಸಾಮಾಜಿಕ ಜಾಲತಾಣದಲ್ಲಿ ಒಂದು ಸುತ್ತು ಹಾಕಿ ಬರಲೇಬೇಕು. ಕೈಯಲ್ಲಿ ಮೊಬೈಲ್ ಇದ್ದಾಗ ವಾಸ್ತವ ಜಗತ್ತನ್ನೇ ಮರೆತು, ಭ್ರಮಾ ಲೋಕದಲ್ಲಿ ಮುಳುಗಿರುತ್ತಾರೆ. ಇಂದಿನ ಬಹುತೇಕ ಯುವಕರು ಮೊಬೈಲ್ ಮೋಡಿಯಲ್ಲಿ ಬಿದ್ದಿದ್ದಾರೆ. ಒಮ್ಮೆ ಫೋನಿನಲ್ಲಿ ಮಗ್ನರಾದರೆ ಸಾಕು ತಮ್ಮ ಸುತ್ತ ಏನು ನಡೆಯುತ್ತಿದೆ ಎಂಬುದೇ ತಿಳಿಯುವುದಿಲ್ಲ. ಇದಿಷ್ಟು ಒಂದು ಭಾಗವಾದರೆ, ಮತ್ತೊಂದೆಡೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಲು ರೀಲ್ಟ್, ಶಾರ್ಟ್ಸ್ ಎಂಬ ವಿಡಿಯೋಗಳನ್ನು ಮಾಡುತ್ತಾರೆ. ರೀಲ್ಸ್ ಉನ್ಮಾದದಲ್ಲಿ ರಾತ್ರೋರಾತ್ರಿ ಸ್ಟಾರ್ ಆಗಲು ಅಪಾಯವನ್ನು ತಮ್ಮ ಬಳಿಗೆ ಎಳೆದುಕೊಳ್ಳುತ್ತಿದ್ದಾರೆ ಮತ್ತು ಸಾವಿನ ಕೂಪಕ್ಕೂ ಸಿಲುಕುತ್ತಿದ್ದಾರೆ.