ಆರ್ಟ್​ ಆಫ್​ ಲಿವಿಂಗ್​ಗೆ 5 ಕೋಟಿ ರೂ. ದಂಡ ಮರುಪಾವತಿಸಿ; ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್ ಆದೇಶ | Supreme Court

ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ
ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ
Published on
ನವದೆಹಲಿ: ಖ್ಯಾತ ಆಧ್ಯಾತ್ಮಿಕ ಗುರು ಶ್ರೀ ರವಿಶಂಕರ್ ಗುರೂಜಿ ನೇತೃತ್ವದ ಆರ್ಟ್ ಆಫ್ ಲಿವಿಂಗ್ ಆಧ್ಯಾತ್ಮಿಕ ಸಂಸ್ಥೆಗೆ ಮಹತ್ವದ ಪರಿಹಾರವಾಗಿ ಸುಪ್ರೀಂಕೋರ್ಟ್(Supreme Court)​, ಆರ್ಟ್​ ಆಫ್​ ಲಿವಿಂಗ್​ಗೆ 5 ಕೋಟಿ ರೂ. ದಂಡ ಮರುಪಾವತಿಸಿ ಎಂದು ಶನಿವಾರ(ಆ. 22) ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಆದೇಶ ನೀಡಿದೆ.
2017ರಲ್ಲಿ ಆರ್ಟ್ ಆಫ್ ಲಿವಿಂಗ್ ವಿಶ್ವ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಿದ ಸಂದರ್ಭದಲ್ಲಿ ದೆಹಲಿಯ ಪರಿಸರ ಸೂಕ್ಷ್ಮ ಯಮುನಾ ಪ್ರವಾಹ ಪ್ರದೇಶಗಳಿಗೆ ಹಾನಿ ಮಾಡಿದ ಆರೋಪದ ಮೇಲೆ ಡಿಡಿಎ​ ಸಂಸ್ಥೆಗೆ 5 ಕೋಟಿ ರೂ. ದಂಡ ವಿಧಿಸಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಶನಿವಾರ(ಆ. 23) ವಿಚಾರಣೆ ನಡೆಸಿದ ಅಂತಿಮ ತೀರ್ಪು ನೀಡಿದ ಸುಪ್ರೀಂಕೋರ್ಟ್, ಆರ್ಟ್ ಆಫ್ ಲಿವಿಂಗ್ ಆಯೋಜಿಸಿದ್ದ ಕಾರ್ಯಕ್ರಮದಿಂದಾಗಿ ಯಮುನಾ ನದಿಯ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ಹಾನಿಯಾಗಿದೆ ಎಂಬುದಕ್ಕೆ ಯಾವುದೇ ನೇರ ಪುರಾವೆಗಳಿಲ್ಲ ಎಂದು ಹೇಳಿತು. ಮತ್ತು ಆರ್ಟ್ ಆಫ್ ಲಿವಿಂಗ್ ಪರವಾಗಿ ದಂಡವನ್ನು ಪಾವತಿಸಿದ್ದ ವಿಕಾಸ್ ಕೇಂದ್ರಕ್ಕೆ ಮೊತ್ತವನ್ನು ಮರುಪಾವತಿಸುವಂತೆ ಆದೇಶ ನೀಡಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net