ಈ ಕುರಿತು ಮಾತನಾಡಿರುವ ಉಪ ಪೊಲೀಸ್ ಆಯುಕ್ತ ಶಕ್ತಿ ಮೋಹನ್ ಅವಸ್ಥಿ, ಆರೋಪಿ ಯುವತಿ ಉಳಿದುಕೊಂಡಿದ್ದ ಪಿಜಿಗೆ ನುಗ್ಗಿ ಗುಂಡು ಹಾರಿಸಿದ್ದಾನೆ. ಮಾಹಿತಿ ತಿಳಿದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ತೆರಳಿ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದಿತ್ತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ವಿಧಿವಿಜ್ಞಾನ ತಂಡ ಅಪರಾಧದ ಸ್ಥಳವನ್ನು ಪರಿಶೀಲಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.