ಹೃದಯಾಘಾತದಿಂದ ಖ್ಯಾತ ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ನಿಧನ |Nana Patekar

ಬಾಲಿವುಡ್ ಹಿರಿಯ ನಟ ಮತ್ತು ಚಲನಚಿತ್ರ ನಿರ್ಮಾಪಕ ನಾನಾ ಪಾಟೇಕರ್ ಅವರು ಗುರುವಾರ(ಅ. 08) ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಯಾಗಿದೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಹಿರಿಯ ನಟ ನಾನಾ ಪಾಟೇಕರ್
ಹಿರಿಯ ನಟ ನಾನಾ ಪಾಟೇಕರ್
Published on: 

ಪಣಜಿ: ಬಾಲಿವುಡ್ ಹಿರಿಯ ನಟ ಮತ್ತು ಚಲನಚಿತ್ರ ನಿರ್ಮಾಪಕ ನಾನಾ ಪಾಟೇಕರ್ ಅವರು ಗುರುವಾರ(ಅ. 08) ಗೋವಾದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಗೋವಾದ ಡೋನಾ ಪೌಲಾದಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 5.20ರ ಸುಮಾರಿಗೆ ನಾನಾ ಪಾಟೇಕರ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಕುಟುಂಬಸ್ಥರು ಅವರನ್ನು ಪಣಜಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ವೈದ್ಯರು ಸುಮಾರು 45 ನಿಮಿಷಗಳ ಕಾಲ ಅವರನ್ನು ಬದುಕುಳಿಸಲು ಸಿಪಿಆರ್ ಸೇರಿ ಅನೇಕ ಚಿಕಿತ್ಸೆ ನೀಡಿದ್ದಾರೆ. ಆದ್ರೆ ಯಾವುದೇ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ ಎಂದು ಘೋಷಿಸಿದ್ದಾರೆ. ಅವರ ನಿಧನಕ್ಕೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಇನ್ನೂ ಪಾಟೇಕರ್ ಅವರ ಪುತ್ರ ಮಲ್ಹಾರ್ ಪಾಟೇಕರ್ ಪುಣೆಯಲ್ಲಿದ್ದು, ಗೋವಾಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Also Read
ಲಖನೌಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿತ; ಮುಂಭಾಗಕ್ಕೆ ಹಾನಿ: ತುರ್ತು ಭೂಸ್ಪರ್ಶ | IndiGo flight
ಹಿರಿಯ ನಟ ನಾನಾ ಪಾಟೇಕರ್

1951 ಜನವರಿ 01ರಂದು ಮಹಾರಾಷ್ಟ್ರದಲ್ಲಿ ಜನಿಸಿದ ನಾನಾ ಪಾಟೇಕರ್ ಅವರ ನಿಜವಾದ ಹೆಸರು ವಿಶ್ವನಾಥ್ ಪಾಟೇಕರ್. ಬಾಲಿವುಡ್ ಮತ್ತು ಮರಾಠಿ ಚಿತ್ರರಂಗದ ದಿಗ್ಗಜ ನಟರಾಗಿದ್ದರು. 1978ರಲ್ಲಿ ಗಮನ್ ಮೂಲಕ ತಮ್ಮ ಚಲನಚಿತ್ರ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು, ಪರಿಂದಾ, ಕ್ರಾಂತಿವೀರ್, ಅಗ್ನಿ ಸಾಕ್ಷಿ , ಖಾಮೋಶಿ: ದಿ ಮ್ಯೂಸಿಕಲ್, ಅಬ್ ತಕ್ ಛಪ್ಪನ್ ಮತ್ತು ನಟಸಾಮ್ರಾಟ್ ಸೇರಿದಂತೆ ಚಿತ್ರಗಳಲ್ಲಿ ನಟಿಸಿ ಖ್ಯಾತಿಯನ್ನು ಪಡೆದಿದ್ದರು.

ನಾನಾ ಪಾಟೇಕರ್ ಅವರು ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. 1989ರಲ್ಲಿ 'ಪರಿಂದಾ' ಚಿತ್ರಕ್ಕಾಗಿ ಅತ್ಯುತ್ತಮ ಪೋಷಕ ನಟ, 1994 ರಲ್ಲಿ 'ಕ್ರಾಂತಿವೀರ್' ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ, ಹಾಗೂ 1996ರಲ್ಲಿ 'ಅಗ್ನಿ ಸಾಕ್ಷಿ' ಚಿತ್ರದಲ್ಲಿನ ಅತ್ಯುತ್ತಮ ಪೋಷಕ ನಟನೆಗೆ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ. ಅಷ್ಟೇ ಅಲ್ಲದೇ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ 2013ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net