ಕೊಲ್ಕತ್ತಾ: ಆರ್ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡವರಲ್ಲಿ ಅಂದಿನ ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್, ಅಭಿಷೇಕ್ ಗುಪ್ತಾ ಮತ್ತು ಇಂದಿರಾ ಮುಖ್ಯೋಪಾಧ್ಯಾಯ ಸೇರಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಗೂ ಸಹ ಆದೇಶಿಸಲಾಗಿದೆ.