ಟೆಸ್ಟ್​ ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್; ವೇಗವಾಗಿ100 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ | Rishabh Pant

ರಿಷಭ್ ಪಂತ್
ರಿಷಭ್ ಪಂತ್
Published on
ನವದೆಹಲಿ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಟಾರ್ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್‌ಮನ್ ರಿಷಭ್ ಪಂತ್(Rishabh Pant) ಇತಿಹಾಸ ನಿರ್ಮಿಸಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಕ್ರಿಕೆಟಿಗ ಮತ್ತು ವಿಶ್ವದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಟೆಸ್ಟ್​ನ ನಾಲ್ಕನೇ ದಿನದ ಇನ್ನಿಂಗ್ಸ್​ನಲ್ಲಿ ಲಹಿರು ಕುಮಾರ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಪಂತ್ ಈ ಮೈಲಿಗಲ್ಲು ಸ್ಥಾಪಿಸಿದರು. ಮತ್ತು ಈ ಸಿಕ್ಸರ್ ಅವರ​​ 20ನೇ ಟೆಸ್ಟ್ ಅರ್ಧಶತಕವನ್ನೂ ದಾಖಲಿಸಿತು. ಜೊತೆಗೆ ಕೇವಲ 51ನೇ ಪಂದ್ಯದಲ್ಲಿ 100 ಸಿಕ್ಸರ್​ಗಳನ್ನು ಹೊಡೆಯುವ ಮೂಲಕ ವೇಗದ ಆಟಗಾರ ಎನಿಸಿಕೊಂಡಿದ್ದಾರೆ.
ಇಂಗ್ಲೆಂಡ್‌ನ ಮಾಜಿ ನಾಯಕ ಬೆನ್ ಸ್ಟೋಕ್ಸ್ ತಮ್ಮ 82ನೇ ಟೆಸ್ಟ್‌ನಲ್ಲಿ ಈ ದಾಖಲೆಯನ್ನು ತಲುಪಿದ್ದರು. 138 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಬ್ರೆಂಡನ್ ಮೆಕಲಮ್ 107 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಂತ್ ಈಗ 100 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಆಡಮ್ ಗಿಲ್‌ಕ್ರಿಸ್ಟ್ ಕೂಡ 100 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
  1. ಬೆನ್ ಸ್ಟೋಕ್ಸ್ (ಇಂಗ್ಲೆಂಡ್) - 138 ಸಿಕ್ಸರ್​ಗಳು
  2. ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್) - 107 ಸಿಕ್ಸರ್​ಗಳು
  3. ಆಡಮ್ ಗಿಲ್‌ಕ್ರಿಸ್ಟ್ (ಆಸ್ಟ್ರೇಲಿಯಾ) - 100 ಸಿಕ್ಸರ್​ಗಳು
  4. ರಿಷಭ್ ಪಂತ್ (ಭಾರತ) - 100 ಸಿಕ್ಸರ್​ಗಳು
  5. ಕ್ರಿಸ್ ಗೇಲ್ (ವೆಸ್ಟ್​ ಇಂಡೀಸ್) - 98 ಸಿಕ್ಸರ್​ಗಳು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net