ನವದೆಹಲಿ: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿಗೆ ಸಂಬಂಧಪಟ್ಟ ವಿಷಯ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಬಾರಾಮತಿ ವಿಮಾನ ಅಪಘಾತದ ಹಿಂದೆ ಸಂಚು ಅಡಗಿದೆ ಎಂಬ ಗಂಭೀರ ಶಂಕೆಯನ್ನು ವ್ಯಕ್ತಪಡಿಸಿರುವ ಎನ್‌ಸಿಪಿ (ಶರದ್ ಪವಾರ್) ಬಣದ ಶಾಸಕ ಮತ್ತು ಸಂಬಂಧಿ ರೋಹಿತ್ ಪವಾರ್, ಗುರುವಾರ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ (Rohit Pawar meets Rahul) ಮಹತ್ವದ ದಾಖಲೆಗಳನ್ನು ಸಲ್ಲಿಸಿದ್ದಾರೆ.