100 ಕೋಟಿ ರೂ. ಲಂಚ ಪ್ರಕರಣ; ಹೈಕೋರ್ಟ್ ಜಾಮೀನು ನಿರಾಕರಣೆ ಬೆನ್ನಲ್ಲೇ ಡಿಎಂಕೆ ಮಾಜಿ ಸಚಿವ ಅನ್ಬಿಲ್ ಮಹೇಶ್ ಬಂಧನ | Anbil Mahesh

ಖಾಸಗಿ ಶಾಲೆಗಳಿಗೆ ಪರವಾನಗಿ ಮತ್ತು ಇತರ ಅನುಮೋದನೆಗಳನ್ನು ನೀಡುವಲ್ಲಿ ನಡೆದ 100 ಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ ಅವರನ್ನು ಸೋಮವಾರ(ಅ. 26) ಚೆನ್ನೈ ಪೊಲೀಸರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದೆ ಎಂದು ವರದಿಯಾಗಿದೆ.
ಡಿಎಂಕೆ ಮಾಜಿ ಸಚಿವ ಅನ್ಬಿಲ್ ಮಹೇಶ್ ಬಂಧನ
ಡಿಎಂಕೆ ಮಾಜಿ ಸಚಿವ ಅನ್ಬಿಲ್ ಮಹೇಶ್ ಬಂಧನ
Published on: 

ಚೆನ್ನೈ: ಖಾಸಗಿ ಶಾಲೆಗಳಿಗೆ ಪರವಾನಗಿ ಮತ್ತು ಇತರ ಅನುಮೋದನೆಗಳನ್ನು ನೀಡುವಲ್ಲಿ ನಡೆದ 100 ಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ ಅವರನ್ನು ಸೋಮವಾರ(ಅ. 26) ಚೆನ್ನೈ ಪೊಲೀಸರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದೆ ಎಂದು ವರದಿಯಾಗಿದೆ.

ಸರ್ಕಾರಿ ಅನುಮೋದನೆ ಪಡೆಯುವ ಭರವಸೆಯ ಮೇರೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಪ್ರಕರಣದ ತನಿಖೆಯ ಭಾಗವಾಗಿ ಈ ಬಂಧನ ನಡೆದಿದೆ. ಸೋಮವಾರ ಮದ್ರಾಸ್ ಹೈಕೋರ್ಟ್ ಮಹೇಶ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬಳಿಕ ಸಿಸಿಬಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

2021 ರಿಂದ 2026ರವರೆಗೆ ಶಾಲಾ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ, ಮಹೇಶ್ ಅವರು ಪಕ್ಷದ ನಿಧಿ ಎಂಬ ನೆಪದಲ್ಲಿ 1,000ಕ್ಕೂ ಹೆಚ್ಚು ಖಾಸಗಿ ಶಾಲಾ ಆಡಳಿತ ಮಂಡಳಿಗಳಿಂದ ಹಣ ಸಂಗ್ರಹಿಸಿದ್ದರು ಎಂದು ಆರೋಪಿಸಲಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಾಶ್ವತ ಮಾನ್ಯತೆ ಮತ್ತು ಇತರ ಆಡಳಿತಾತ್ಮಕ ಅನುಮತಿಗಳನ್ನು ನೀಡುವ ಪ್ರಕ್ರಿಯೆಗೆ ಈ ಹಣದ ಪಾವತಿಗಳು ಸಂಬಂಧಿಸಿವೆ ಎಂದು ಆರೋಪಿಸಲಾಗಿದೆ.

Also Read
ಮತಗಳ್ಳತನ ಆರೋಪದ ಅಭಿಯಾನಕ್ಕೆ ಪ್ರತಿಯಾಗಿ ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ನಡೆಸಲು ಮುಂದಾದ ಬಿಜೆಪಿ: ನ. 02ರಿಂದ ಪಾದಯಾತ್ರೆ | BJP
ಡಿಎಂಕೆ ಮಾಜಿ ಸಚಿವ ಅನ್ಬಿಲ್ ಮಹೇಶ್ ಬಂಧನ

ತಮಿಳುನಾಡಿನ ಖಾಸಗಿ ಶಾಲೆಗಳ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಇಲಂಗೋವನ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 27ರಂದು ಸಾಲಿಗ್ರಾಮಂನ ನಿವಾಸಿ ಬಿ.ಟಿ. ಅರಸಕುಮಾರ್(59) ಎನ್ನುವವರನ್ನು ಬಂದಿಸಿದ್ದರು. ಜೊತೆಗೆ ಇನ್ನಿಬ್ಬರನ್ನು ಬಂಧಿಸಲಾಗಿತ್ತು.

ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ 250ಕ್ಕೂ ಹೆಚ್ಚು ಜನರನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಸರ್ಕಾರಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಪ್ರಾಥಮಿಕ ತನಿಖೆಯಲ್ಲಿ 177 ಖಾಸಗಿ ಶಾಲೆಗಳಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ. ಬಳಿಕ ಸಾಕ್ಷ್ಯಾದಾರಗಳು, ಪುರಾವೆಗಳ ಆಧಾರದ ಮೇಲೆ ಅನ್ಬಿಲ್ ಮಹೇಶ್ ಅವರ ಹೆಸರನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net