ಟಿಎಂಸಿ ನಾಯಕಿ ಸುಶ್ಮಿತಾ ದೇವ್ ಸಹ ಈ ಘಟನೆಯನ್ನು ಖಂಡಿಸಿದ್ದು, ಇದೊಂದು ಪೂರ್ವಯೋಜಿತ ಮತ್ತು ಸಂಚಿನ ದಾಳಿ ಎಂದು ಕರೆದಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಇದು ಸಾರ್ವಜನಿಕರ ಆಕ್ರೋಶ ಅಲ್ಲ, ಬದಲಿಗೆ ಟಿಎಂಸಿಯನ್ನು ಮೌನಗೊಳಿಸಲು ಬಿಜೆಪಿ ನಡೆಸಿದ ಪ್ರಯತ್ನ ಎಂದು ಹೇಳಿದ್ದಾರೆ. ಮತ್ತೊಬ್ಬ ಟಿಎಂಸಿ ನಾಯಕಿ ಸಾಗರಿಕಾ ಘೋಷ್ ಈ ದಾಳಿಯನ್ನು ಆಘಾತಕಾರಿ ಎಂದು ಬಣ್ಣಿಸಿದ್ದು, ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಭಿಷೇಕ್ ಮೇಲೆ ದಾಳಿ ನಡೆದಾಗ ಪೊಲೀಸರು ಎಲ್ಲಿಯೂ ಕಾಣಿಸಲಿಲ್ಲ ಎಂದು ದೂರಿದ್ದಾರೆ.