ಇಂಡಿಗೋ ಬಿಕ್ಕಟ್ಟು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ವಿಮಾನಯಾನ ಸಂಸ್ಥೆಯ ಕಾರ್ಯಾಚರಣೆಗೆ ರದ್ದತಿ ಮತ್ತು ವಿಳಂಬಗಳು ನಿರಂತರವಾಗಿ ಅಡ್ಡಿಯಾಗುತ್ತಲೇ ಇದೆ. ಮಂಗಳವಾರವೂ ನಡೆಯುತ್ತಿರುವ ಅವ್ಯವಸ್ಥೆಯ ನಡುವೆ ದೆಹಲಿ, ಮುಂಬೈ, ಕೋಲ್ಕತ್ತಾ, ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಸರ್ಕಾರದ ಪ್ರತಿನಿಧಿಗಳು ಮತ್ತು ಡಿಜಿಸಿಎ ಅಧಿಕಾರಿಗಳು ಇಂದು ಇಂಡಿಗೊ ಸಿಇಒ ಪೀಟರ್ ಎಲ್ಬರ್ರನ್ನು ಭೇಟಿಯಾಗಿ ಸದ್ಯದ ಪರಿಸ್ಥಿತಿಯ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ(ಏಜೆನ್ಸೀಸ್).