ಹುಡುಗಿಯರ ಹಾಸ್ಟೆಲ್​ನಲ್ಲಿ ದೆವ್ವ ವದಂತಿ: ಚಿತ್ಕಾರ ವಿವಿ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಗಳಿಂದ ಭಾರಿ ಪ್ರತಿಭಟನೆ, ಪೊಲೀಸ್ ವಾಹನ ಜಖಂ | Chitkara University

ಪಂಜಾಬ್​ನ ಪಟಿಯಾಲದಲ್ಲಿರುವ ಚಿತ್ಕಾರ ವಿಶ್ವವಿದ್ಯಾಲಯದ ಹುಡುಗಿಯರ ಹಾಸ್ಟೆಲ್​ವೊಂದರಲ್ಲಿ ದೆವ್ವ ಇದೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ ಹಿನ್ನೆಲೆ ಶುಕ್ರವಾರ(ಸೆ. 25) ತಡರಾತ್ರಿ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದ್ದು, ಪೊಲೀಸ್ ಗಸ್ತು ವಾಹನವೊಂದನ್ನು ಜಖಂಗೊಳಿಸಿದ್ದಾರೆ.
ಚಿತ್ಕಾರ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಚಿತ್ಕಾರ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Published on: 

ಚಂಡೀಗಢ: ಪಂಜಾಬ್​ನ ಪಟಿಯಾಲದಲ್ಲಿರುವ ಚಿತ್ಕಾರ ವಿಶ್ವವಿದ್ಯಾಲಯದ ಹುಡುಗಿಯರ ಹಾಸ್ಟೆಲ್​ವೊಂದರಲ್ಲಿ ದೆವ್ವ ಇದೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ ಹಿನ್ನೆಲೆ ಶುಕ್ರವಾರ(ಸೆ. 25) ತಡರಾತ್ರಿ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದ್ದು, ಪೊಲೀಸ್ ಗಸ್ತು ವಾಹನವೊಂದನ್ನು ಜಖಂಗೊಳಿಸಿದ್ದಾರೆ.

ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮತ್ತು ಆಕೆಯ ಆತ್ಮವು ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಕಾಡುತ್ತಿದೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ ಬಳಿಕ ಹಲವು ವಿದ್ಯಾರ್ಥಿನಿಯರು ಭಯಗೊಂಡಿದ್ದಾರೆ ಎನ್ನಲಾಗಿದೆ.

ತಡರಾತ್ರಿ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳು, ಆವರಣದಲ್ಲಿ ಅಂತಹ ಯಾವುದೇ ಆತ್ಮಹತ್ಯೆ ನಡೆದಿಲ್ಲ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ. ಕೆಲ ದುಷ್ಕರ್ಮಿಗಳು ಕೊಠಡಿ ಬಾಗಿಲು ಬಡಿದು ಅಥವಾ ಜೋರಾಗಿ ತಳ್ಳಿ ಅಲ್ಲಿಂದ ಪರಾರಿಯಾಗಿದ್ದು ಇಂತಹ ಭಯದ ವಾತಾವರಣಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

Also Read
KPSC ನೇಮಕಾತಿಗಳಲ್ಲಿ ಅಕ್ರಮ ಆರೋಪ; ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ | State government
ಚಿತ್ಕಾರ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಆದರೆ ಅಧಿಕಾರಿಗಳ ಸ್ಪಷ್ಟನೆಯನ್ನು ನಂಬದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದ್ದಾರೆ. ಇದೇ ವೇಳೆ ಪರಿಸ್ಥಿತಿ ಹದಗೆಟ್ಟಿದ್ದು, ತೀರಾ ವಿಕೋಪಕ್ಕೆ ಹೋಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಕ್ಯಾಂಪಸ್​ಗೆ ಆಗಮಿಸಿ ವಿದ್ಯಾರ್ಥಿಗಳನ್ನು ಚದುರಿಸಲು ಪ್ರಯತ್ನಿಸಿದ್ದು, ಹಿಂಸಾಚಾರಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳು ವಿವಿ ಆಸ್ತಿಗೆ ಹಾನಿ ಮಾಡಿದ್ದಲ್ಲದೇ, ಪೊಲೀಸರ ಮೇಲೆ ಹಲ್ಲೆ ನಡೆಸಿ, ಅವರ ವಾಹನವನ್ನು ಜಖಂಗೊಳಿಸಿದ್ದಾರೆ.

ಇನ್ನೂ ಮಾಹಿತಿ ತಿಳಿದು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಡಿಎಸ್ಪಿ ಬಾನೂರ್ ಸುಖದೇವ್ ಸಿಂಗ್, ವಿದ್ಯಾರ್ಥಿಗಳ ಜೊತೆ ಮಾತನಾಡಿದ್ದಾರೆ. ಮತ್ತು ವಿದ್ಯಾರ್ಥಿನಿಯ ದೂರಿನ ಮೇರೆಗೆ ಸಿಸಿಟಿವಿ ಪರಿಶೀಲಿಸಿ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ವಾಪಸ್ ತಮ್ಮ ಕೊಠಡಿಗಳಿಗೆ ತೆರಳಿದ್ದಾರೆ. ಇನ್ನೂ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net