2019ರಲ್ಲಿ ಶಬರಿಮಲೆ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ನೇಮಕಗೊಂಡಿದ್ದ ಮುರಾರಿ ಬಾಬು, 2024ರವರೆಗೂ ಆ ಹುದ್ದೆಯಲ್ಲಿ ಮುಂದುವರೆದಿದ್ದರು. ಈ ವೇಳೆ ನಡೆದ ಚಿನ್ನ ಕಳವು ಪ್ರಕರಣದಲ್ಲಿ ಎಸ್ಐಟಿ ಅವರನ್ನು ಪ್ರಕರಣದಲ್ಲಿ ಎರಡನೇ ಆರೋಪಿಯನ್ನಾಗಿಸಿತ್ತು. ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಗೆ ಚಿನ್ನವನ್ನು ಹಸ್ತಾಂತರಿಸುವಲ್ಲಿ ಅವರ ಪಾತ್ರವನ್ನು ಎಸ್ಐಟಿ ಪತ್ತೆ ಹಚ್ಚಿತ್ತು.