ನವದೆಹಲಿ: ಭಾರತದ ಬ್ಯಾಡ್ಮಿಂಟನ್ ಲೋಕದ ದಿಗ್ಗಜ ಆಟಗಾರ್ತಿ, ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ( Saina Nehwal ) ಅವರು ಸ್ಪರ್ಧಾತ್ಮಕ ಬ್ಯಾಡ್ಮಿಂಟನ್‌ನಿಂದ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರು, ಇನ್ನು ಮುಂದೆ ವೃತ್ತಿಪರ ಆಟ ಮುಂದುವರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.