ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್(DC Win), ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಯುವ ಪ್ರತಿಭೆ ಸಮೀರ್ ರಿಜ್ವಿ ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನವು ಮುಂಬೈ ಪಡೆಯ ತಲೆಬಿಸಿಗೆ ಕಾರಣವಾಗಿದ್ದು, ಡೆಲ್ಲಿ ಸತತ ಎರಡನೇ ಜಯದೊಂದಿಗೆ ಅಂಕಪಟ್ಟಿಯಲ್ಲಿ ಭರ್ಜರಿ ಜಿಗಿತ ಕಂಡಿದೆ.