ಹಾಗೆಯೇ, ಸ್ಥಳದಲ್ಲಿ ತಯಾರಿಸಲಾಗುತ್ತಿರುವ ಆಹಾರವನ್ನು ಹಾಳಾದ ಮತ್ತು ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಿ ತಯಾರಿಸಲಾಗಿದೆ ಎಂದು ತನಿಖಾಧಿಕಾರಿಗಳು ಕಂಡುಹಿಡಿದ್ದಿದ್ದು, ಇದರಲ್ಲಿ ಹಳೆಯ ಬೇಯಿಸಿದ ಮೊಟ್ಟೆ ಮತ್ತು ಅಡುಗೆ ಎಣ್ಣೆ ಸೇರಿಸಿ, ಇವುಗಳನ್ನು ಹಲವು ಬಾರಿ ಮರುಬಳಕೆ ಮಾಡಲಾಗಿದೆ ಎಂದು ಅಧಿಕಾರಿಗಳು ದೃಢಿಕರಿಸಿದ್ದಾರೆ. ಈ ಸ್ಥಳದಲ್ಲಿ ಅಗತ್ಯ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಲಾಗಿದೆ ಮತ್ತು ಇದು ಗ್ರಾಹಕರಿಗೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.