ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಅಪೋಲೋ ಆಸ್ಪತ್ರೆಗೆ ದಾಖಲು | L. K. Advani

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರಿಗೆ ಚೆಸ್ಟ್ ಇನ್ಸ್​ಪೆಕ್ಷನ್​ನಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಶುಕ್ರವಾರ(ಅ.16) ಸಂಜೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
lk
Published on: 

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರಿಗೆ ಚೆಸ್ಟ್ ಇನ್ಸ್​ಪೆಕ್ಷನ್​ನಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಶುಕ್ರವಾರ(ಅ.16) ಸಂಜೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಸಂಜೆ 7.30ರ ಸುಮಾರಿಗೆ ಅಡ್ವಾಣಿಯವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಯೋಸಹಜ ಖಾಯಿಲೆಗಳಿಂದ ಮೇ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು. 2024ರಲ್ಲೂ ಅವರನ್ನು ಅಪೋಲೋ ಮತ್ತು ಐಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಸೇರಿದಂತೆ ಹಲವಾರು ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Also Read
ರಾಜಕೀಯದ ಆರಂಭದಲ್ಲಿ ನಿತೀಶ್​ ಕುಮಾರ್​ಗೆ ಸಹಾಯ ಮಾಡಲು 9 ಕೊಲೆ ಮಾಡಿದ್ದೇನೆ: ಜೆಡಿಯು ಶಾಸಕ ಅನಂತ್ ಸಿಂಗ್ | Anant Singh
lk

ಇತ್ತೀಚೆಗೆ ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಅ. 7ರಂದು ಅಡ್ವಾಣಿ ಅವರನ್ನು ಅವರ ದೆಹಲಿ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಬಳಿಕ ಅಡ್ವಾಣಿ ಅವರ ದಶಕಗಳ ಸಾರ್ವಜನಿಕ ಸೇವೆಯು ರಾಷ್ಟ್ರೀಯ ಜೀವನದ ಮೇಲೆ ಅಳಿಸಲಾಗದ ಛಾಪು ಮೂಡಿಸಿದೆ ಎಂದು ಹೇಳಿದ್ದರು.

2024ರಲ್ಲಿ ಎಲ್​.ಕೆ.ಅಡ್ವಾಣಿಯವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮೋದಿ ಅವರು ಸ್ವತಃ ಅಡ್ವಾಣಿಯವರ ಮನೆಗೆ ಹೋಗಿ ಪ್ರಧಾನ ಮಾಡಿದ್ದರು (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net