ಕ್ಷೇತ್ರ ಬದಲಾವಣೆಯನ್ನು ಎಐಎಡಿಎಂಕೆ ಮತ್ತು ಬಿಜೆಪಿ ತೀವ್ರವಾಗಿ ಟೀಕಿಸಿದ್ದು, ಸೆಂಥಿಲ್ ಬಾಲಾಜಿ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಮತ್ತು ಕರೂರ್‌ನಲ್ಲಿ ಎದುರಾಗಿರುವ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಳ್ಳಲು ಅವರು ಕೊಯಮತ್ತೂರಿಗೆ ಓಡಿ ಬಂದಿದ್ದಾರೆ ಎಂದು ಎಐಎಡಿಎಂಕೆ ವಕ್ತಾರ ಕೋವೈ ಸತ್ಯನ್ ಆರೋಪಿಸಿದ್ದಾರೆ. 2021 ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದ್ದ ಬಿಜೆಪಿ ನಾಯಕಿ ವನತಿ ಶ್ರೀನಿವಾಸನ್ ಅವರು, ಸೆಂಥಿಲ್ ಬಾಲಾಜಿ ಸ್ಪರ್ಧೆಯನ್ನು ಹತಾಶದ ನಡೆ ಎಂದು ಕುಟುಕಿದ್ದು, ಡಿಎಂಕೆಗೆ ಕೊಯಮತ್ತೂರಿನಲ್ಲಿ ಸ್ಥಳೀಯ ನಾಯಕತ್ವದ ಕೊರತೆಯಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಲೇವಡಿ ಮಾಡಿದ್ದಾರೆ.