ಸುಪ್ರೀಂಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿಗೆ ಮತ್ತೆ ಹಿನ್ನಡೆ: ಫ್ರೀಜ್​ ಆಗಿರುವ ಬ್ಯಾಂಕ್ ಖಾತೆಗಳನ್ನು ತೆರೆಯಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ | Mamata Banerjee

ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆಯಾಗಿದ್ದು, ಗುರುವಾರ(ಅ. 01) ಸ್ಥಗಿತಗೊಂಡ ಪಕ್ಷದ ನಿಧಿಯ ಬ್ಯಾಂಕ್ ಖಾತೆಗಳನ್ನು ಮತ್ತೆ ತೆರೆಯಲು ಅನುಮತಿ ಕೋರಿ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ
Published on: 

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆಯಾಗಿದ್ದು, ಗುರುವಾರ(ಅ. 01) ಸ್ಥಗಿತಗೊಂಡ ಪಕ್ಷದ ನಿಧಿಯ ಬ್ಯಾಂಕ್ ಖಾತೆಗಳನ್ನು ಮತ್ತೆ ತೆರೆಯಲು ಅನುಮತಿ ಕೋರಿ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಪಶ್ಚಿಮ ಬಂಗಾಳ ಪೊಲೀಸರು ಭ್ರಷ್ಟಾಚಾರದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ ನಾಲ್ಕು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಈ ಖಾತೆಗಳಲ್ಲಿ 804 ಕೋಟಿ ರೂ. ಮೌಲ್ಯದ ಹಣವಿದೆ. ಈ ಹಿನ್ನೆಲೆ ಸ್ಥಗಿತಗೊಂಡ ಖಾತೆಗಳನ್ನು ಮತ್ತೆ ತೆರೆಯಲು ನಿರ್ದೇಶನ ಕೋರಿ ಮಮತಾ ಬ್ಯಾನರ್ಜಿ ಅವರ ಬಣ ಕೋಲ್ಕತ್ತಾ ಹೈಕೋರ್ಟ್​ಗೆ ಮೆಟ್ಟಿಲೇರಿತ್ತು.

ಆದರೆ ಆಗಸ್ಟ್ 27 ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಖಾತೆಗಳನ್ನು ಮರುಬಳಕೆ ಮಾಡಲು ಅವಕಾಶ ನೀಡಲು ನಿರಾಕರಿಸಿತು. ಈ ಆದೇಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅವರ ಬಣವು ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿತ್ತು.

Also Read
ಫಾರ್ಮ್ 6 ಕಾನೂನು ಬಾಹಿರ ಬದಲಾವಣೆಗೆ ಟಿಸಿಎಸ್​​ಗೆ ಆದೇಶಿಸಿದ್ಯಾರು?; ಚುನಾವಣಾ ಆಯೋಗದ ವಿರುದ್ಧ ದಾಳಿ ಮುಂದುವರೆಸಿದ ರಾಹುಲ್ | Rahul Gandhi
ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ

ಗುರುವಾರ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಎಂ ಸುಂದರೇಶ್ ಮತ್ತು ಪಿಬಿ ವರಾಳೆ ಅವರ ಪೀಠವು, ಕೋಲ್ಕತ್ತಾ ಹೈಕೋರ್ಟ್ ಹೊರಡಿಸಿದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ.

ಇದೇ ವೇಳೆ ತೃಣಮೂಲ ಕಾಂಗ್ರೆಸ್ ಎರಡು ಬಣಗಳಾಗಿ ವಿಭಜನೆಯಾಗಿರುವುದರಿಂದ, ಪಕ್ಷದ ಬ್ಯಾಂಕ್ ಖಾತೆಯಲ್ಲಿರುವ ನಿಧಿಯ ಹಕ್ಕು ಯಾವ ಬಣಕ್ಕೆ ಇದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ನ್ಯಾಯಾಲಯ ಗಮನಿಸಿತು.

ಪಕ್ಷದ ಚಿಹ್ನೆಯ ಕುರಿತು ಚುನಾವಣಾ ಆಯೋಗದೊಂದಿಗೆ ನಡೆಯುತ್ತಿರುವ ವಿವಾದದ ಹಿನ್ನೆಲೆಯಲ್ಲಿ ಈ ಖಾತೆಗಳು ಯಾವ ಬಣಕ್ಕೆ ಸೇರಿವೆ ಎಂಬ ಪ್ರಶ್ನೆಗಳು ಏಳುತ್ತಿವೆ. ಈ ಹಿನ್ನೆಲೆ ಯಾವುದು ನಿಜವಾದ ಟಿಎಂಸಿ ಎಂಬ ಅರ್ಜಿಯ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಕೋಲ್ಕತ್ತಾ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net