ಗುರುಗ್ರಾಮದಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ; 7 ಕಾರ್ಮಿಕರ ಸಾವು, ಹಲವರಿಗೆ ಗಂಭೀರ ಗಾಯ! Wall collapses

Wall Collapse (ಸಾಂದರ್ಭಿಕ ಚಿತ್ರ)
Wall Collapse (ಸಾಂದರ್ಭಿಕ ಚಿತ್ರ)
Published on

ಪ್ರಮುಖ ಮುಖ್ಯಾಂಶಗಳು

  • ನಿರ್ಮಾಣ ಹಂತದ ಗೋಡೆ ಕುಸಿತ ಬಿದ್ದ ಪರಿಣಾಮ ಏಳು ಕಾರ್ಮಿಕರ ಸಾವು, ಅನೇಕರಿಗೆ ಗಾಯ
  • ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಗೋಡೆ ಇದ್ದಕ್ಕಿದ್ದಂತೆ ಕುಸಿತ
  • ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸಂತಾಪ
ಹರಿಯಾಣ: ನಿರ್ಮಾಣ ಹಂತದ ಗೋಡೆ ಕುಸಿತ (Wall Collapse) ಬಿದ್ದ ಹಿನ್ನಲೆ ಏಳು ಕಾರ್ಮಿಕರು ಮೃತಪಟ್ಟಿದ್ದು, ಅನೇಕರು ಮಣ್ಣಿನ ಅವಶೇಷದ ಅಡಿಯಲ್ಲಿ ಸಿಲುಕಿರುವ ಘಟನೆ ಹರಿಯಾಣದ ಗುರುಗ್ರಾಮ್​ನಲ್ಲಿ ನಡೆದಿದೆ.

ಘಟನೆ ಏನು?

ಅಧಿಕಾರಿಗಳ ಪ್ರಕಾರ, ಸೋಮವಾರ (ಮಾ.09) ಸಂಜೆ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಗೋಡೆ ಇದ್ದಕ್ಕಿದ್ದಂತೆ ಕುಸಿದ ಪರಿಣಾಮ 12-15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು. ಈ ವೇಳೆ ಕಾರ್ಯಾಚರಣೆ ನಡೆಸಿ ಅವರನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆಗಾಗಲೇ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಹೇಳಿದರು.
ಮೃತರನ್ನು ಸತೀಶ್, ಭಾಗೀರಥ, ಮಿಲನ್, ಶಿವಶಂಕರ್, ಮಂಗಲ್ ಮತ್ತು ಪರಮೇಶ್ವರ್ ಎಂದು ಗುರುತಿಸಲಾಗಿದ್ದು, ಅವರ ಕುಟುಂಬಗಳನ್ನು ಸಂಪರ್ಕಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಸಂತಾಪ ಸೂಚಿಸಿದ ಹರಿಯಾಣ ಮುಖ್ಯಮಂತ್ರಿ..
ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ತೀವ್ರ ಅನುಕಂಪವನ್ನು ವ್ಯಕ್ತಪಡಿಸಿದ್ದು, "ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬದವರಿಗೆ ನೀಡಲಿ" ಎಂದು ಪ್ರಾರ್ಥಿಸಿದ್ದಾರೆ.
ಈ ವೇಳೆ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು. ಆದಾಗ್ಯೂ, ಘಟನೆಯಲ್ಲಿ ಗಾಯಗೊಂಡವರಿಗೆ ಮುಖ್ಯಮಂತ್ರಿ ನಿಧಿಯಿಂದ 2 ಲಕ್ಷ ರೂ. ಮಂಜೂರು ಮಾಡಿದರು.
ಅಪಘಾತದ ಕಾರಣವನ್ನು ನಿರ್ಧರಿಸಲು ವಿವರವಾದ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಪುನಃ ಮರುಕಳಿಸದಂತೆ ಆಡಳಿತ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net