ಮೃತ ಬಾಲಕನನ್ನು ಯಶ್ ವಾನ್ (7) ಎಂದು ಗುರುತಿಸಲಾಗಿದ್ದು, ರಸ್ತೆಯಲ್ಲಿ ಸೈಕಲ್ನಲ್ಲಿ ಹೋಗುವಾಗ ಆಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಈ ವೇಳೆ, ಗಂಭೀರವಾಗಿ ಗಾಯಗೊಂಡ ಪರಿಣಾಮ ಯಶ್ನನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಯಿತು. ಆದರೆ, ಮಿದುಳು ನಿಷ್ಕ್ರಿಯಗೊಂಡ ಕಾರಣ, ಚಿಕಿತ್ಸೆ ಫಲಿಸದೆ ಬಾಲಕ ಉಸಿರು ಚೆಲ್ಲಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.