ಎರಡೂವರೆ ತಿಂಗಳ ನಾಯಿ ಮರಿಯ ಮೇಲೆ ಲೈಂಗಿಕ ದೌರ್ಜನ್ಯ; ನಾಯಿಯ ಸ್ಥಿತಿ ಚಿಂತಾಜನಕ! ಯುವಕ ಅರೆಸ್ಟ್​..

DoG
DoG
Published on
ಮುಂಬೈ: ಕೇವಲ 2.5 ತಿಂಗಳ ನಾಯಿ ಮರಿಯ ಮೇಲೆ 20 ವರ್ಷದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ದೇಶದ ವಾಣಿಜ್ಯ ನಗರಿ ಮುಂಬೈನ ಮಲಾಡ್ ಈಸ್ಟ್‌ನ ಕುರಾನ್ ಗ್ರಾಮದಲ್ಲಿ ಮನುಕುಲವೇ ತಲೆ ತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ಸಾರ್ವಜನಿಕ ಶೌಚಾಲಯವೊಂದರಲ್ಲಿ ನಾಯಿ ಮರಿಯ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂಬ ಸುಳಿವು ಸಿಗುತ್ತಿದ್ದಂತೆಯೇ 'ಪಾಲ್ ಫೌಂಡೇಶನ್' (PAL Foundation) ಎಂಬ ಪ್ರಾಣಿ ಕಲ್ಯಾಣ ಸಂಸ್ಥೆಯ ಕಾರ್ಯಕರ್ತರು ಮತ್ತು ಮುಂಬೈ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಆರಂಭದಲ್ಲಿ ಆರೋಪಿಯು ಶೌಚಾಲಯದ ಬಾಗಿಲು ತೆರೆಯಲು ನಿರಾಕರಿಸಿದ್ದಾನೆ. ಆದರೆ ಪೊಲೀಸರು ಬಲವಂತವಾಗಿ ಬಾಗಿಲು ತೆರೆದು ಒಳ ನುಗ್ಗಿದಾಗ ಆರೋಪಿಯ ಪೈಶಾಚಿಕ ಕೃತ್ಯ ಬಯಲಾಗಿದೆ.
ದೃಶ್ಯಗಳು ವೈರಲ್, ಸಾರ್ವಜನಿಕ ಆಕ್ರೋಶ!
ರಕ್ಷಣಾ ಕಾರ್ಯಾಚರಣೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನಸಾಮಾನ್ಯರಲ್ಲಿ ಭಾರಿ ಆಕ್ರೋಶ ಮೂಡಿಸಿದೆ. ವೀಡಿಯೊದಲ್ಲಿ ಆರೋಪಿಯು ಅರೆಬೆತ್ತಲೆ ಸ್ಥಿತಿಯಲ್ಲಿ ಸಿಕ್ಕಿಬಿದ್ದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆಯುವಾಗ ನೆರೆದಿದ್ದ ಜನರು ಆತನ ವಿರುದ್ಧ ಕಿಡಿಕಾರಿದ್ದಾರೆ.

ನಾಯಿ ಮರಿಯ ಸ್ಥಿತಿ ಚಿಂತಾಜನಕ

ರಕ್ಷಿಸಲ್ಪಟ್ಟ ನಾಯಿ ಮರಿಯನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ದಾಖಲಿಸಲಾಗಿದೆ. "ನಾಯಿ ಮರಿಯ ಸ್ಥಿತಿ ಪ್ರಸ್ತುತ ಗಂಭೀರವಾಗಿದೆ. ಯಾವ ಮೂಕ ಪ್ರಾಣಿಗೂ ಇಂತಹ ಕ್ರೌರ್ಯ ಎದುರಾಗಬಾರದು. ನಾವು ನ್ಯಾಯಕ್ಕಾಗಿ ಆಗ್ರಹಿಸುತ್ತೇವೆ," ಎಂದು ಪಾಲ್ ಫೌಂಡೇಶನ್ ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ.

ಕಾನೂನು ಕ್ರಮ

ಬಂಧಿತ ಯುವಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂಬೈ ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ,(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net