ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳಲ್ಲೇ ಮತ್ತೆ ಆಸ್ಪತ್ರೆಗೆ ದಾಖಲಾದ ಶರದ್ ಪವಾರ್ | Sharad Pawar

ಎನ್​ಸಿಪಿ ಸಂಸ್ಥಾಪಕ ಮತ್ತು ಹಿರಿಯ ನಾಯಕ ಶರದ್ ಪವಾರ್ ಅವರನ್ನು ಬುಧವಾರ(ನ. 04) ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ಕೆಲವೇ ಗಂಟೆಗಳ ಬಳಿಕ, ಮತ್ತೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಎನ್​ಸಿಪಿ ಹಿರಿಯ ನಾಯಕ ಶರದ್ ಪವಾರ್
ಎನ್​ಸಿಪಿ ಹಿರಿಯ ನಾಯಕ ಶರದ್ ಪವಾರ್
Published on: 

ನವದೆಹಲಿ: ಎನ್​ಸಿಪಿ ಸಂಸ್ಥಾಪಕ ಮತ್ತು ಹಿರಿಯ ನಾಯಕ ಶರದ್ ಪವಾರ್ ಅವರನ್ನು ಬುಧವಾರ(ನ. 04) ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ಕೆಲವೇ ಗಂಟೆಗಳ ಬಳಿಕ, ಮತ್ತೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಎಕ್ಸ್​ನಲ್ಲಿ ಮಾಹಿತಿ ನೀಡಿರುವ ಪುತ್ರಿ ಮತ್ತು ಸಂಸದೆ ಸುಪ್ರಿಯಾ ಸುಳೆ, ನಾವು ಬಾಬಾ ಅವರನ್ನು ಹೆಚ್ಚಿನ ಪರೀಕ್ಷೆಗಳಿಗಾಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸುತ್ತಿದ್ದೇವೆ. ನಿಮ್ಮೆಲ್ಲರ ಕಾಳಜಿ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ.

Also Read
ಯುವಕರು ತಮ್ಮ ಆತಂಕ ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸುವುದು ದೇಶ ವಿರೋಧಿಯಲ್ಲ: ದತ್ತಾತ್ರೇಯ ಹೊಸಬಾಳೆ | Dattatreya Hosabale
ಎನ್​ಸಿಪಿ ಹಿರಿಯ ನಾಯಕ ಶರದ್ ಪವಾರ್

ಸೋಮವಾರ(ನ. 02) ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಶರದ್ ಪವಾರ್ ಅವರನ್ನು ಪುಣೆಯ ರೂಬಿ ಹಾಲ್ ಕ್ಲಿನಿಕ್​ಗೆ ದಾಖಲಾಗಿದ್ದರು. ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ್ದು, ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿತ್ತು. ರೂಬಿ ಹಾಲ್ ಕ್ಲಿನಿಕ್‌ನ ಮುಖ್ಯ ಹೃದ್ರೋಗ ತಜ್ಞ ಡಾ.ಪರ್ವೇಜ್ ಕೆ. ಗ್ರಾಂಟ್ ಅವರು ಆರೋಗ್ಯ ಸ್ಥಿತಿಯು ಸುಧಾರಿಸುವ ನಿರೀಕ್ಷೆಯಿದೆ. ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ಅವರು ವೈದ್ಯರ ನಿಗಣನೆಯಲ್ಲಿಯೇ ಇರಲಿದ್ದಾರೆ ಎಂದು ತಿಳಿಸಿದ್ದರು.

ಇಂದು ಬೆಳಗ್ಗೆ ಗುಣಮುಖರಾಗಿದ್ದಾರೆ ಎಂದು ಆಸ್ಪತ್ರೆಗೆ ಬಿಡುಗಡೆಗೊಂಡು ಮನೆಗೆ ತೆರಳಿದ್ದರು. ಆದರೆ ಮತ್ತೆ ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ (ಏಜೆನ್ಸೀಸ್).