ಇತ್ತೀಚೆಗೆ ಎರ್ನಾಕುಲಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದ್ದರು, ಈ ಸಭೆಯಲ್ಲಿ ಸಂಸದ ತರೂರ್ಗೆ ಸೂಕ್ತ ಗೌರವ ನೀಡಿಲ್ಲ ಎಂಬ ಮಾತುಗಳು ಕೇಳಿಬಂದಿದ್ದು, ಇದರಿಂದ ಬೇಸರಗೊಂಡಿರುವ ಅವರು ಪಕ್ಷದ ನಾಯಕರುಗಳ ಜೊತೆ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ. ರಾಜ್ಯ ನಾಯಕರು ಮತ್ತು ಹೈಕಮಾಂಡ್ನ ವರಿಷ್ಠರು ಸಂಪರ್ಕಿಸಲು ಪ್ರಯತ್ನಿಸಿದರೂ, ತರೂರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಮತ್ತು ಶನಿವಾರ ಕೋಝಿಕ್ಕೋಡ್‌ನಲ್ಲಿ ನಡೆಯಲಿರುವ ಕೇರಳ ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.