ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ 63 ಸ್ಥಾನಗಳನ್ನು ಗೆದ್ದಿದ್ದರೆ, ಮಿತ್ರಪಕ್ಷಗಳಾದ ಐಯುಎಂಎಲ್ (22), ಕೇರಳ ಕಾಂಗ್ರೆಸ್ (8) ಮತ್ತು ಆರ್ಎಸ್ಪಿ (3) ಸ್ಥಾನಗಳನ್ನು ಗೆದ್ದಿವೆ. ಮೇ 7 ರಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆಯನ್ನು ಹೈಕಮಾಂಡ್‌ಗೆ ಬಿಡಲಾಗಿತ್ತು. ಈ ರೇಸ್‌ನಲ್ಲಿ ಕೆ.ಸಿ. ವೇಣುಗೋಪಾಲ್ ಅವರ ಹೆಸರು ಮುಂಚೂಣಿಯಲ್ಲಿದ್ದರೂ, ಅಂತಿಮವಾಗಿ ಹೈಕಮಾಂಡ್ ವಿ.ಡಿ. ಸತೀಶನ್ ಅವರ ಹೆಸರನ್ನು ಘೋಷಿಸಿದೆ.