ಮಗಳು ಎಷ್ಟು ಹೊತ್ತಾದರೂ ಮನೆಗೆ ಬರದಿದ್ದಾಗ ಗಾಬರಿಗೊಂಡ ಪಾಲಕರು ದಮಯಂತಿಯ ಸ್ನೇಹಿತರು, ಸಂಬಂಧಿಕರು ಹಾಗೂ ಆಕೆಯ ಜೊತೆ ತರಬೇತಿ ಪಡೆಯುತ್ತಿದ್ದ ಸಹ ಶೂಟರ್‌ಗಳಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆದರೆ ಎಲ್ಲಿಯೂ ಆಕೆಯ ಸುಳಿವು ಸಿಗದಿದ್ದಾಗ, ತಡಮಾಡದೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿದ್ದಾರೆ.