ಪೊಲೀಸರು ಈ ಘಟನೆಯನ್ನು ಅನುಮಾನಾಸ್ಪದವೆಂದು ಪರಿಗಣಿಸಿ ತನಿಖೆ ಆರಂಭಿಸಿದರು. ತನಿಖೆಯ ಸಮಯದಲ್ಲಿ, ದಾಮಿನಿ ಮತ್ತು ತುಷಾರ್ ಅವರ ಮೊಬೈಲ್ ಫೋನ್‌ಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಇಬ್ಬರು ದೀರ್ಘ ಕಾಲ ಮಾತನಾಡಿದ್ದರು. ತುಷಾರ್ ಅವರ ಮೊಬೈಲ್ ಫೋನ್‌ನಲ್ಲಿ ಹಾವುಗಳ ಛಾಯಾಚಿತ್ರಗಳು ಸಹ ಪೊಲೀಸರಿಗೆ ಸಿಕ್ಕಿವೆ. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಮೀರತ್ ಎಸ್‌ಎಸ್‌ಪಿ ಅವಿನಾಶ್ ಪಾಂಡೆ ಹೇಳಿದ್ದಾರೆ, (ಏಜೆನ್ಸೀಸ್).