ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದಾಗ, ಆರೋಪಿ ಸ್ನೇಹಾ ಮೆರ್ಲಿನ್, ಬಾಲಕಿಗೆ ಚಿನ್ನದ ಬ್ರೇಸ್‌ಲೆಟ್ ಸೇರಿದಂತೆ ಹಲವು ಉಡುಗೊರೆಗಳನ್ನು ನೀಡಿದ್ದ ವಿಷಯ ಬೆಳಕಿಗೆ ಬಂದಿತು. ಈಕೆ 14 ವರ್ಷದ ಅಪ್ರಾಪ್ತ ಬಾಲಕನ ಮೇಲೂ ಲೈಂಗಿಕ ದೌರ್ಜನ್ಯ ಎಸಗಿ, ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅಲ್ಲದೆ, ಆ ದೃಶ್ಯಾವಳಿಗಳನ್ನು ತೋರಿಸಿ ಬಾಲಕನಿಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಳು ಎಂಬ ವಿಷಯವೂ ಪೊಲೀಸ್ ತನಿಖೆಯ ವೇಳೆ ಬಹಿರಂಗವಾಗಿತ್ತು.