ಆದರೆ, ಬಳಿಕ ಮಾತನಾಡಿದ ಅವರು, ಬಿಜೆಪಿ ಅಥವಾ ಸರ್ಕಾರ ಯಾವುದೇ ಸಮುದಾಯದ ವಿರುದ್ಧ ತಾರತಮ್ಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. “ನಮ್ಮ ನೀತಿ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್’ ಆಗಿದೆ. ಜನರು ನಮಗೆ ಮತ ಹಾಕಿದರೂ ಹಾಕದಿದ್ದರೂ, ಸಾರ್ವಜನಿಕ ಸೇವೆ ಮಾಡುವುದು ನಮ್ಮ ಜವಾಬ್ದಾರಿ. ಅಭಿವೃದ್ಧಿ ಕಾಮಗಾರಿಗಳು ಮುಂದುವರಿಯುತ್ತವೆ” ಎಂದು ಹೇಳಿದರು. ಜನರು ಮತ ನೀಡಿದರೆ ಇನ್ನಷ್ಟು ಸಮರ್ಪಣೆಯಿಂದ ಕೆಲಸ ಮಾಡುತ್ತೇವೆ. ಮತ ನೀಡದಿದ್ದರೂ ಅಭಿವೃದ್ಧಿ ನಿಲ್ಲುವುದಿಲ್ಲ ಎಂದೂ ಅವರು ಹೇಳಿದ್ದಾರೆ.