ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯಯುತ ತೆರಿಗೆ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಹಾಗೂ ವಿಶೇಷ ಅನುದಾನ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು 16ನೇ ಹಣಕಾಸು ಆಯೋಗದ ಮುಂದೆ ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ’ ಎಂಬ ಅಭಿಯಾನವನ್ನು ಆರಂಭಿಸಿದ್ದಾರೆ.