ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ಆಡಳಿತರೂಢ ತೃಣಮೂಲ ಕಾಂಗ್ರೆಸ್ ನಡುವೆ ಮಾತಿನ ಸಮರ ಶುರುವಾಗಿದ್ದು, ದೇಶದ ಪ್ರಧಾನಿಯೇ ನುಸುಳುಕೋರ ಎಂಬ ಹೇಳಿಕೆಯನ್ನು ಟೀಕಿಸಿರುವ ಬಿಜೆಪಿ(BJP), ಸಿಎಂ ಮಮತಾ ಬ್ಯಾನರ್ಜಿ ಸಾಂವಿಧಾನಿಕ ಹುದ್ದೆಯನ್ನು ಹೊಂದಲು ಅರ್ಹರಲ್ಲ ಎಂದು ವಾಗ್ದಾಳಿ ನಡೆಸಿದೆ.