ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಮಾಜಿ ಟ್ರಸ್ಟಿ ಅನಿಲ್ ಮಿಶ್ರಾ ಮತ್ತು ಮಂದಿರದ ಅಧಿಕಾರಿ ಗೋಪಾಲ್ ರಾವ್ ಅವರನ್ನು ತನಿಖಾ ತಂಡ ವಿಚಾರಣೆ ನಡೆಸಿದೆ. ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜುಲೈ 6 ರಂದು ನಡೆಯಲಿರುವ ಟ್ರಸ್ಟ್ ಸಭೆಯಲ್ಲಿ ಇದರ ಅಂತಿಮ ತೀರ್ಮಾನ ಹೊರಬೀಳಲಿದೆ. ಮತ್ತೊಂದೆಡೆ ಈ ಘಟನೆ ರಾಜಕೀಯ ವಲಯದಲ್ಲೂ ಭಾರಿ ಸಂಚಲನ ಮೂಡಿಸಿದ್ದು, ಟ್ರಸ್ಟ್ ರಚನೆಗೂ ಮುನ್ನ ಸಂಗ್ರಹವಾದ ದೇಣಿಗೆಯ ಬಹಿರಂಗ ಲೆಕ್ಕ ನೀಡಬೇಕು ಮತ್ತು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಇತ್ತ ಆರ್‌ಎಸ್‌ಎಸ್ ಕೂಡ ತೀವ್ರ ಅಸಮಾಧಾನ ಹೊರಹಾಕಿದ್ದು, ಈ ಕಳ್ಳತನ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಒತ್ತಾಯಿಸಿದೆ(ಏಜೆನ್ಸೀಸ್).