ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲೆಸೆತ ಪ್ರಕರಣ; ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು | Mohan Bhagwat

ಮೋಹನ್ ಭಾಗವತ್
ಮೋಹನ್ ಭಾಗವತ್
Published on
ಲಖನೌ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್(Mohan Bhagwat) ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆದಿದೆ ಎಂದು ಶುಕ್ರವಾರ(ಜೂ. 12) ವರದಿಯಾಗಿದೆ.
ನಿನ್ನೆ ರಾತ್ರಿ ಉತ್ತರ ಪ್ರದೇಶದ ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದರು. ಎಸಿ ಕೋಚ್​ಗೆ ಕಿಟಕಿಗೆ ಕಲ್ಲಿನ ಏಟು ಬಿದ್ದು ಹಾನಿಯಾಗಿದೆ. ಆದರೆ ಅದೇ ಕೋಚ್​ನಲ್ಲಿ ಮೋಹನ್ ಭಾಗವತ್ ಪ್ರಯಾಣ ಮಾಡ್ತಿದ್ದರು ಎನ್ನಲಾಗಿದೆ.
ಕಿಟಕಿಯ ಇನ್ನೊಂದು ಬದಿಯಲ್ಲಿ ಕುಳಿತಿದ್ದರಿಂದ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎನ್ನಲಾಗಿದೆ. ರೈಲ್ವೆ ರಕ್ಷಣಾ ಪಡೆ ಮತ್ತು ಸ್ಥಳೀಯ ಪೊಲೀಸರು ಘಟನೆಯ ತನಿಖೆಯನ್ನು ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ಮೂವರು ಕಲ್ಲು ತೂರಾಟ ನಡೆಸಿದ್ದನ್ನು ಕಂಡುಕೊಂಡಿದ್ದಾರೆ.
ಕಲ್ಲು ತೂರಾಟದಲ್ಲಿ ಭಾಗಿಯಾದ ಇಬ್ಬರನ್ನು ಬಂಧಿಸಲಾಗಿದೆ. ಇನ್ನೊಬ್ಬನಿಗಾಗಿ ಹುಡುಕಾಟ ನಡೆದೆದೆ. ರೈಲಿನ ಮೇಲಿನ ದಾಳಿ ಉದ್ದೇಶಪೂರ್ವಕವಾಗಿ ನಡೆದಿದೆಯೇ ಅಥವಾ ಸಾಮಾನ್ಯವಾಗಿ ಹಳಿಗಳ ಬಳಿ ಇದ್ದುಕೊಂಡು ಎಸೆದಿದ್ದಾರೆಯೇ ಎಂದು ಭದ್ರತಾ ಪಡೆಗಳು ತನಿಖೆ ನಡೆಸಿವೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net