ಈ ವಿಷಯವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಹಂಚಿಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭಾರತದ ಇತಿಹಾಸದಲ್ಲೇ ಅತ್ಯಂತ ಯುವ ವಿರೋಧಿ ಪ್ರಧಾನಿ ಎಂದು ಕರೆದಿರುವ ರಾಹುಲ್, ವಿಫಲ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಕೇಳಲು ಸಹ ಪ್ರಧಾನಿಯವರಿಂದ ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.