ಏಕಾಏಕಿ ಅನಾರೋಗ್ಯ: ತಡರಾತ್ರಿ ದೆಹಲಿ ಏಮ್ಸ್​ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ | J P Nadda

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ
Published on
ನವದೆಹಲಿ: ಮಳೆಗಾಲದ ಸಂಸತ್ ಅಧಿವೇಶನ ಮುಗಿದ ಬಳಿಕ ಸಂಜೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ(J P Nadda) ಅವರು ಗುರುವಾರ(ಆ. 13) ತಡರಾತ್ರಿ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಜೆ.ಪಿ.ನಡ್ಡಾ ಆರೋಗ್ಯ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಏಮ್ಸ್​, ಅನಾರೋಗ್ಯದ ಕಾರಣ ಗುರುವಾರ ಸಂಜೆ ಕೇಂದ್ರ ಆರೋಗ್ಯ ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರನ್ನು ಪರಿಶೀಲನೆ ಮಾಡಲಾಗಿದ್ದು, ಕೊರೋನರಿ ಆಂಜಿಯೋಗ್ರಫಿ ಸೇರಿದಂತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ನಿಗಾವಣೆಗಾಗಿ ದಾಖಲಾಗಿದ್ದಾರೆ ಎಂದು ತಿಳಿಸಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net