ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸುನೇತ್ರಾ ಪವಾರ್ | Sunetra Pawar
ಉಪಮುಖ್ಯಮಂತ್ರಿ ಸುನೇತ್ರಾ ಪವಾರ್
Published on:
Copied
Follow Us
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ಇಂದು(ಫೆ. 10) ತಮ್ಮ ಪತಿ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಮರಣದ 13 ದಿನಗಳ ನಂತರ ರಾಜ್ಯ ಸಚಿವಾಲಯದಲ್ಲಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.
ಸುನೇತ್ರಾ ಪವಾರ್ ಅವರು ಬೆಳಗ್ಗೆ ಡಿಸಿಎಂ ಕಚೇರಿಯಲ್ಲಿ ಅಧಿಕಾರ ವಹಿಸಿಕೊಳ್ಳುವಾಗ ಎನ್‌ಸಿಪಿ ನಾಯಕರಾದ ಪ್ರಫುಲ್ ಪಟೇಲ್, ಸುನೀಲ್ ತಟ್ಕರೆ, ಛಗನ್ ಭುಜಬಲ್ ಹಾಗೂ ಧನಂಜಯ್ ಮುಂಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮತ್ತು ಪಕ್ಷದ ಎಲ್ಲಾ ಶಾಸಕರು ಶುಭಕೋರಿದ್ದಾರೆ.
ಅಜಿತ್ ಪವಾರ್ ನಿಧನದ ಬಳಿಕ ಇಂದು ನಡೆಯುತ್ತಿರುವ ಮಹಾರಾಷ್ಟ್ರ ಸಚಿವ ಸಂಪುಟ ಸಭೆಯಲ್ಲಿ ಸುನೇತ್ರಾ ಪವಾರ್ ಭಾಗವಹಿಸಲಿದ್ದಾರೆ. ಫೆಬ್ರವರಿ 23ರ ಬಜೆಟ್ ಅಧಿವೇಶನಕ್ಕಾಗಿ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿಯೂ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಜ. 28ರಂದು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ವಿಮಾನ ಅಪಘಾತದಲ್ಲಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ನಿಧನರಾಗಿದ್ದರು. ಜ. 31ರಂದು ಸುನೇತ್ರಾ ಪವಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಕ್ರೀಡೆ, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆಗಳ ಉಸ್ತುವಾರಿ ನೀಡಲಾಗಿದೆ. ಜೊತೆಗೆ ಬೀಡ್ ಮತ್ತು ಪುಣೆಯ ಉಸ್ತುವಾರಿ ಸಚಿವೆಯಾಗಿದ್ದಾರೆ (ಏಜೆನ್ಸೀಸ್).