ಕಾವೇರಿ ನೀರು ಹಂಚಿಕೆ ವಿವಾದ: ಮುಂದಿನ ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್‌! Cauvery Water dispute

ಕಾವೇರಿ ನೀರು ಹಂಚಿಕೆ ವಿವಾದ: ಮುಂದಿನ ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್‌! Cauvery Water dispute
ಕಾವೇರಿ ನೀರು ಹಂಚಿಕೆ ವಿವಾದ: ಮುಂದಿನ ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್‌! Cauvery Water dispute
Published on

ಪ್ರಮುಖ ಮುಖ್ಯಾಂಶಗಳು

  • ಕಾವೇರಿ ನೀರು ಹಂಚಿಕೆ ವಿವಾದದ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
  • ಸಿಡಬ್ಲ್ಯೂಎಂಎ ಬಳಿ ಹೋಗದೆ ಇಲ್ಲಿಗೆ ಬಂದಿದ್ದೇಕೆ ಎಂದು ತಮಿಳುನಾಡಿಗೆ ಪ್ರಶ್ನೆ
  • ನಾಳೆ ಸಿಡಬ್ಲ್ಯೂಎಂಎ ಸಭೆ ಇದೆ ಎಂದ ತಮಿಳುನಾಡು ಪರ ವಕೀಲರು
  • ನಿಗದಿತ ಪ್ರಮಾಣದ ನೀರು ಬಿಡಲಾಗಿದೆ ಎಂದು ಸ್ಪಷ್ಟಪಡಿಸಿದ ಕರ್ನಾಟಕ ಪರ ವಕೀಲರು
ನವದೆಹಲಿ/ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ( Cauvery Water dispute ) ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದಿನ ಸೋಮವಾರಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ತಮಿಳುನಾಡು ಸರ್ಕಾರದ ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಳ್ಳಲಾಯಿತು. ಕಳೆದ ವಿಚಾರಣೆಯ ವೇಳೆ ನೀಡಿದ್ದ ನಿರ್ದೇಶನದಂತೆ, ಕರ್ನಾಟಕ ಸರ್ಕಾರವು ತಮಿಳುನಾಡಿಗೆ ಹರಿದು ಹೋದ ನೀರಿನ ಅಂಕಿ-ಅಂಶಗಳನ್ನು ನ್ಯಾಯಪೀಠದ ಮುಂದೆ ಮಂಡಿಸಿತು.
ವಿಚಾರಣೆ ವೇಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ತಮಗೆ ಸರಿಯಾಗಿ ನಿರ್ದೇಶನ ನೀಡುತ್ತಿಲ್ಲ ಎಂದು ತಮಿಳುನಾಡು ಪರ ವಕೀಲರು ವಾದ ಮಂಡಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರು, "ಹಾಗಿದ್ದರೆ ನೀವು CWMA ಬಳಿ ಹೋಗಿ, ಇಲ್ಲಿ ಯಾಕೆ ಬಂದಿದ್ದೀರಾ?" ಎಂದು ತಮಿಳುನಾಡಿಗೆ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ತಮಿಳುನಾಡು ಪರ ವಕೀಲರು, ನಾಳೆ CWMA ಸಭೆ ಇದೆ, ನಾವು ಅವರ ಬಳಿ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.
ಕರ್ನಾಟಕದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, ನಾವು ಈಗಾಗಲೇ ತಮಿಳುನಾಡಿಗೆ ನಿಗದಿತ ಪ್ರಮಾಣದ ನೀರನ್ನು ಬಿಟ್ಟಿದ್ದೇವೆ ಎಂದು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದರು. "ನೀರು ಬಿಟ್ಟಿದ್ದಾರೆ ಅಂದ್ಮೇಲೆ ಇನ್ಯಾವ ಸಮಸ್ಯೆ?" ಎಂದು ಪ್ರಶ್ನಿಸಿದ ನ್ಯಾಯಪೀಠ, ಈ ಕುರಿತು ಹೆಚ್ಚಿನ ಪರಿಶೀಲನೆಗಾಗಿ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ಮುಂದೂಡಿ ಆದೇಶಿಸಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net