ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಬೇಷರತ್ ಕ್ಷಮೆಯಾಚಿಸಿದರು. ಆದರೆ ಸಿಜೆಐ, ಅವರು ಗುಂಡು ಹಾರಿಸಿದ್ದಾರೆ, ನ್ಯಾಯಾಂಗ ರಕ್ತ ಸುರಿಸುತ್ತಿದೆ ಎಂದರು. ಸಮಂಜಸ ಟೀಕೆಯನ್ನು ಬೇಡ ಎನ್ನುವುದಿಲ್ಲ ಆದರೆ ವಿದ್ಯಾರ್ಥಿಗಳಿಗೆ ಪಕ್ಷಪಾತದ ಮತ್ತು ಪೂರ್ವಾಗ್ರಹದ ಚಿತ್ರಣ ನೀಡುವುದು ಶಿಕ್ಷಣದ ಅಖಂಡತೆಗೆ ಮಾರಕ ಎಂದು ನ್ಯಾಯಾಲಯ ಹೇಳಿತು.