ಬಿಕ್ಕಟ್ಟನ್ನು ಶಮನಗೊಳಿಸಲು ಕೇಂದ್ರ ಸರ್ಕಾರ ಮತ್ತು ಡಿಜಿಸಿಎ ವಿಫಲವಾಗಿವೆ ಎಂದು ಕಳೆದ ವಾರ ದೆಹಲಿ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಇದೇ ವೇಳೆ ವಿಮಾನ ರದ್ದತಿ ಅಥವಾ ವಿಳಂಬದಿಂದಾಗಿ ಗಂಟೆಗಟ್ಟಲೆ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರಿಗೆ ಪರಿಹಾರ ನೀಡುವಂತೆಯೂ ಅದು ಇಂಡಿಗೋಗೆ ಸೂಚಿಸಿತ್ತು. ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಡಿಜಿಸಿಎ ತೆಗೆದುಕೊಂಡ ಕ್ರಮಗಳನ್ನು ನಾವು ಶ್ಲಾಘಿಸುತ್ತೇವೆ. ಆದರೂ, ವಿಮಾನ ನಿಲ್ದಾಣಗಳಲ್ಲಿ ಲಕ್ಷಾಂತರ ಪ್ರಯಾಣಿಕರ ಕಾಳಜಿ ಮಾಡದೆ ಇಂತಹ ಪರಿಸ್ಥಿತಿ ಉಂಟಾಗಲು ಹೇಗೆ ಅವಕಾಶ ನೀಡಲಾಯಿತು ಎಂಬುದು ಬೇಸರ ತಂದಿದೆ. ಇಂತಹ ಪರಿಸ್ಥಿತಿ ಪ್ರಯಾಣಿಕರಿಗೆ ಅಸೌಕರ್ಯ ಉಂಟುಮಾಡುವುದಷ್ಟೇ ಅಲ್ಲ, ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ, ಏಕೆಂದರೆ ಇಂದಿನ ಪರಿಸ್ಥಿತಿಯಲ್ಲಿ ಪ್ರಯಾಣಿಕರ ವೇಗವಾದ ಸಂಚಾರ ಆರ್ಥಿಕತೆಯನ್ನು ಸಮರ್ಥವಾಗಿ ಕಾರ್ಯನಿರ್ವಹಿಸುವಂತೆ ಮಾಡುವ ಪ್ರಮುಖ ಅಂಶವಾಗಿದೆ. ಎಂದು ನ್ಯಾಯಾಲಯ ಕೇಂದ್ರದ ವಿರುದ್ಧ ಚಾಟಿ ಬೀಸಿತ್ತು.(ಏಜನ್ಸೀಸ್).