ಅರಾವಳಿ ರಕ್ಷಣೆಗೆ ಅಖಾಡಕ್ಕಿಳಿದ ಸುಪ್ರೀಂ ಕೋರ್ಟ್..ನಾಳೆ ಮಹತ್ವದ ವಿಚಾರಣೆ! | Aravalli case

Aravalli case |  ಅರಾವಳಿ ಬೆಟ್ಟಗಳು
Aravalli case | ಅರಾವಳಿ ಬೆಟ್ಟಗಳು
Published on
ದೆಹಲಿ: ಅರಾವಳಿ ಬೆಟ್ಟಗಳಲ್ಲಿನ ಗಣಿಗಾರಿಕೆಗೆ ಸಂಬಂಧಿಸಿದ ವಿಷಯವನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠ, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ.ಜಿ. ಮಸಿಹ್ ಅವರ ಪೀಠ ಸ್ವಯಂ ಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ ಎಂದು ವರದಿಯಾಗಿದೆ.
ಭಾರತದ ಅತ್ಯಂತ ಹಳೆಯ ಮತ್ತು ಪ್ರಮುಖ ಪರ್ವತ ಶ್ರೇಣಿಗಳಲ್ಲೊಂದಾದ ಅರಾವಳಿ ಬೆಟ್ಟದ ಪರಿಸರಕ್ಕೆ ಹಾನಿಯನ್ನುಂಟಾಗಬಹುದು ಎಂದು ಅನೇಕರು ಆತಂಕಗಳ ವ್ಯಕ್ತಪಡಿಸಿದ ಬಳಿಕ ನ್ಯಾಯಾಲಯ ಈ ತೀರ್ಮಾನಕ್ಕೆ ಬಂದಿದೆ.
ಸೋಮವಾರ ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದ್ದು, ಅರಾವಳಿ ಪ್ರದೇಶದಲ್ಲಿನ ಗಣಿಗಾರಿಕೆ ಚಟುವಟಿಕೆಗಳು ಮತ್ತು ಪರಿಸರದ ಮೇಲಿನ ಅವುಗಳ ಪ್ರಭಾವಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ನ್ಯಾಯಾಲಯ ಪರಿಶೀಲಿಸಲನೆ ನಡೆಸಲಿದ್ದು, ಮಾಜಿ ಅರಣ್ಯ ಸಂರಕ್ಷಣಾಧಿಕಾರಿ ಆರ್.ಪಿ. ಬಲ್ವಾನ್ ಕೂಡ ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದರಿಂದ ಪ್ರಕರಣಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.

ಅರಾವಳಿ ಬೆಟ್ಟಗಳು ಪ್ರಾಮುಖ್ಯತೆ..?

ಅರಾವಳಿ ಬೆಟ್ಟಗಳು ಗುಜರಾತ್‌ನಿಂದ ರಾಷ್ಟ್ರ ರಾಜಧಾನಿ ದೆಹಲಿಯವರೆಗೂ ವಿಸ್ತರಿಸಿದ್ದು, ಪರಿಸರವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಅರಣ್ಯ ಪ್ರದೇಶವನ್ನು ಮರುಭೂಮಿಯಾಗುವುದನ್ನು ತಡೆಯಲು, ಜೀವವೈವಿಧ್ಯತೆಯನ್ನು ಬೆಂಬಲಿಸಲು ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ಅರಾವಳಿಗಳ ವಿಷಯವನ್ನು ದುರ್ಬಲಗೊಳಿಸುವುದರಿಂದ, ಈ ಹಿಂದಿನಿಂದ ಸಂರಕ್ಷಿಸಲ್ಪಟ್ಟ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅವಕಾಶ ಸಿಗಬಹುದು ಎನ್ನುವುದು ಪರಿಸರ ಪ್ರೇಮಿಗಳು ಆತಂಕ ಪಡುತ್ತಿದ್ದಾರೆ.
ಈ ವಿಷಯವಾಗಿ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ಕೂಡ ನಡೆದಿದ್ದು, ಅರಾವಳಿ ಬೆಟ್ಟಗಳ ಬಗ್ಗೆ ಆತಂಕ ಪಡುವುದು ಬೇಡ ಎಂದು ಕೇಂದ್ರ ಸರ್ಕಾರ ಹಲವಾರು ಬಾರಿ ಹೇಳಿದೆ. ಇತ್ತ ದೊಡ್ಡ ಪ್ರಮಾಣದ ಗಣಿಗಾರಿಕೆಗೆ ಅವಕಾಶ ನೀಡುವ ಸಲುವಾಗಿ ಬದಲಾವಣೆಯನ್ನು ಮಾಡಲಾಗಿದೆ ಎನ್ನುವುದು ಕಾಂಗ್ರೆಸ್ ಆರೋಪ. ಸರ್ಕಾರ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದು, ಪರ್ವತ ಶ್ರೇಣಿಯನ್ನು ರಕ್ಷಿಸಲು ಬದ್ಧವಾಗಿದೆ ಎಂದು ಹೇಳಿದೆ.
ಕೇಂದ್ರ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಅರಾವಳಿ ಪ್ರದೇಶದಾದ್ಯಂತ ಹೊಸ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ನಿರ್ದೇಶನ ನೀಡಿದ್ದು, ಈ ಕ್ರಮವು ಏಕರೂಪವಾಗಿ ಅನ್ವಯವಾಗುತ್ತದೆ ಮತ್ತು ಬೆಟ್ಟಗಳ ಭೌಗೋಳಿಕ ನಿರಂತರತೆ ಮತ್ತು ಪರಿಸರ ಆರೋಗ್ಯವನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆ. ಅಸ್ತಿತ್ವದಲ್ಲಿರುವ ಗಣಿಗಳನ್ನು ನಿಯಂತ್ರಿಸುವಾಗ ಸುಪ್ರೀಂ ಕೋರ್ಟ್ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ರಾಜ್ಯಗಳನ್ನು ಸಲಹೆ ನೀಡಿದೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net