ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಅಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಮುಂದೂಡಿದ್ದು, ಹಿರಿಯ ವಕೀಲ ರಾಕೇಶ್ ದ್ವಿವೇದಿ ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಈಗಾಗಲೇ ಮದ್ರಾಸ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಚುನಾವಣಾ ಆಯೋಗವು, ಕೇಂದ್ರ ಚುನಾವಣಾ ಆಯೋಗದೊಂದಿಗೆ ಸಮನ್ವಯವನ್ನು ಕಾಯ್ದುಕೊಂಡಿದ್ದು, ಶೇ 99 ಕ್ಕೂ ಹೆಚ್ಚು ಮತದಾರರು ಫಾರ್ಮ್‌ಗಳನ್ನು ಸ್ವೀಕರಿಸಿದ್ದಾರೆ ಮತ್ತು ಶೇಕಡಾ 50 ಕ್ಕೂ ಹೆಚ್ಚು ಮತದಾರರು ಈಗಾಗಲೇ ಡಿಜಿಟಲ್ ರೂಪದಲ್ಲಿ ಸಲ್ಲಿಸಿದ್ದಾರೆ ಎನ್ನಲಾಗಿದೆ.