ಹಿಂದೆ ಅಸ್ಸಾಂನ ಸಿಲ್ಚಾರ್ ಕ್ಷೇತ್ರದಿಂದ ಕಾಂಗ್ರೆಸ್‌ನ ಲೋಕಸಭಾ ಸಂಸದರಾಗಿದ್ದ ಸುಸ್ಮಿತಾ ದೇವ್ ಅವರು, 2019 ರ ಚುನಾವಣೆಯ ಸೋಲಿನ ನಂತರ ಕಾಂಗ್ರೆಸ್ ತೊರೆದು 2021 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಟಿಎಂಸಿಯಲ್ಲಿ ಅತ್ಯಂತ ವೇಗವಾಗಿ ಬೆಳೆದ ಅವರು ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದಲ್ಲದೆ, ರಾಜ್ಯಸಭಾ ಸ್ಥಾನವನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.