ಕೌಟುಂಬಿಕ ಕಲಹ ಶಂಕೆ: ನೀರಿನ ಟ್ಯಾಂಕ್‌ಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು | Four die
ಸಾಂದರ್ಭಿಕ ಚಿತ್ರ
Published on:
Copied
Follow Us
ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಭಾನುವಾರ(ಜು. 26) ರಾತ್ರಿ ನೀರಿನ ಟ್ಯಾಂಕ್‌ಗೆ ಬಿದ್ದು ಒಂದೇ ಕುಟುಂಬದ ನಾಲ್ವರು(Four members die) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಜೈಸಲ್ಮೇರ್ ಜಿಲ್ಲೆಯ ರಾಮದೇವ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಲೋಹರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಜುಗ್ತಾರಾಮ್ ಸುತಾರ್ ಅವರ ಮಗ ಜಸ್ರಾಜ್ ಸುತಾರ್ (29), ಅವರ ಪತ್ನಿ ನಿರ್ಮಾ ಸುತಾರ್ (25), ಅವರ ಹತ್ತು ವರ್ಷದ ಮಗ ಭರತ್ ಮತ್ತು ಐದು ವರ್ಷದ ಮಗಳು ಮನೀಷಾ ಎಂದು ಗುರುತಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಾಮದೇವ್ರಾ ಪೊಲೀಸ್ ಠಾಣೆ ಎಸ್‌ಎಚ್‌ಒ ದೇವಕಿಶನ್, ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜಸ್ರಾಜ್ ನೀರಿನ ಟ್ಯಾಂಕ್‌ಗೆ ಹಾರಿರುವುದನ್ನು ಅವರ ಸಹೋದರ ನೋಡಿದ್ದಾರೆ. ತಕ್ಷಣ ಅವರು ಕುಟುಂಬಸ್ಥರು ಮತ್ತು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಆದರೆ ಅವರು ಸ್ಥಳಕ್ಕೆ ತಲುಪುವ ಹೊತ್ತಿಗೆ ಎಲ್ಲರೂ ಮೃತಪಟ್ಟಿದ್ದರು ಎಂದು ಹೇಳಿದ್ದಾರೆ.
ಗ್ರಾಮಸ್ಥರ ಸಹಾಯದಿಂದ ಶವಗಳನ್ನು ಟ್ಯಾಂಕ್‌ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಇನ್ನೂ ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯಲಿದೆ. ಮರಣೋತ್ತರ ಪರೀಕ್ಷೆಯ ವರದಿ ಮತ್ತು ತನಿಖೆ ಪೂರ್ಣಗೊಂಡ ನಂತರವೇ ಘಟನೆಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).