ದೇಶದ ಶೇ. 65ರಷ್ಟು ಜನಸಂಖ್ಯೆಯು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ಈ ಪ್ರತಿಭಾವಂತ, ಬದ್ಧತೆಯುಳ್ಳ ಹಾಗೂ ನುರಿತ ಯುವ ಜನತೆಯು ದೇಶದ ಅತ್ಯಮೂಲ್ಯ ಆಸ್ತಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಬಣ್ಣಿಸಿದ್ದಾರೆ. ನಮ್ಮ ವಿದ್ಯಾರ್ಥಿಗಳೇ ಭಾರತದ ಭವಿಷ್ಯದ ರೂವಾರಿಗಳಾಗಿದ್ದು, ಸಾರ್ವಜನಿಕ ಪರೀಕ್ಷೆಗಳು ಅವರಿಗೆ ಅವಕಾಶಗಳ ಪ್ರಮುಖ ಹೆಬ್ಬಾಗಿಲುಗಳಾಗಿವೆ ಎಂದಿದ್ದಾರೆ. ನೀಟ್-ಯುಜಿ (NEET-UG) ಪರೀಕ್ಷೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳು ಹಾಗೂ ಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷೆಗಳ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಮಹತ್ವ ಪಡೆದಿವೆ.