ವಿಷ ಆಹಾರ ಸೇವನೆ ಶಂಕೆ; ಮೂರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು | food poisoning

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪ್ರದೇಶದ ಮನೆಯೊಂದರಲ್ಲಿ ಶನಿವಾರ(ಅ. 17) ಮೂವರು ಅಪ್ರಾಪ್ತ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ವಿಷ ಆಹಾರ ಸೇವನೆ ಶಂಕೆ; ಮೂರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು | food poisoning
Published on: 

ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪ್ರದೇಶದ ಮನೆಯೊಂದರಲ್ಲಿ ಶನಿವಾರ(ಅ. 17) ಮೂವರು ಅಪ್ರಾಪ್ತ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದ ನಾಗ್ಲಾ ಶ್ರೀ ಪದಮ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮಹೇಶ್ (37), ಅವರ ಪತ್ನಿ ಲಲಿತಾ (35) ಮತ್ತು ಅವರ ಮಕ್ಕಳಾದ ಲಡ್ಡು (11), ಮಿಶ್ತಿ (7) ಹಾಗೂ ಸಾಕ್ಷತ್ (3) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಶನಿವಾರ ಬೆಳಿಗ್ಗೆ ರಬುಪುರ ಪೊಲೀಸ್ ಠಾಣೆಗೆ ಸಾವಿನ ಬಗ್ಗೆ ಮಾಹಿತಿ ಬಂದಿದ್ದು, ಸ್ಥಳೀಯ ಪೊಲೀಸರು, ಹಿರಿಯ ಅಧಿಕಾರಿಗಳು, ಆಹಾರ ಸುರಕ್ಷತಾ ಇಲಾಖೆಯ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ವಿಷ ಆಹಾರ ಸೇವನೆಯಿಂದ ಈ ಸಾವುಗಳು ಸಂಭವಿಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

Also Read
ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ 100% ಸುಂಕ ಹೇರುವ ನಿಬಂಧನೆ ಕೈಬಿಟ್ಟ ಟ್ರಂಪ್: ಭಾರತಕ್ಕೆ ರಿಲೀಫ್​ | Donald Trump
ವಿಷ ಆಹಾರ ಸೇವನೆ ಶಂಕೆ; ಮೂರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು | food poisoning

ಪ್ರಾಥಮಿಕ ವಿಚಾರಣೆಯ ಸಂದರ್ಭದಲ್ಲಿ, ಕುಟುಂಬದವರು ರಾತ್ರಿ ನೂಡಲ್ಸ್ ತಿಂದಿದ್ದರು ಎಂದು ನೆರೆಹೊರೆಯವರು ಮತ್ತು ಮಹೇಶ್‌ನ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಐವರು ಶವವಾಗಿ ಪತ್ತೆಯಾಗಿದ್ದಾರೆ. ಮೃತರ ಬಾಯಿಯಿಂದ ನೊರೆ ಬಂದಿದೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ಪೊಲೀಸ್ ಅಧಿಕಾರಿಗಳು, ಮರಣೋತ್ತರ ಪರೀಕ್ಷೆಗಳು ಮತ್ತು ಇತರ ವೈಜ್ಞಾನಿಕ ತನಿಖೆಗಳ ನಂತರವೇ ಸಾವಿಗೆ ಕಾರಣವನ್ನು ನಿರ್ಧರಿಸಬಹುದು. ಕಾನೂನು ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ವರದಿ ಬಂದ ಬಳಿಕ ಪೂರ್ತಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net