294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕೇವಲ 80 ಸ್ಥಾನಗಳಿಗೆ ಸೀಮಿತವಾಗುವ ಮೂಲಕ ಹೀನಾಯ ಸೋಲು ಅನುಭವಿಸಿದೆ. ಸುವೇಂದು ಅಧಿಕಾರಿ ಅವರು ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ 15,115 ಮತಗಳ ಅಂತರದಿಂದ ಗೆಲುವು ಸಾಧಿಸಿ, 'ಜೈಂಟ್ ಕಿಲ್ಲರ್' ಪಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.