ಅಭಿಷೇಕ್ ಶರ್ಮಾ ಗೋಲ್ಡನ್ ಡಕ್‌ಗೆ ಔಟಾದರು, ಇನ್ನೋರ್ವ ಆರಂಭಿಕ ಆಟಗಾರ ಇಶಾನ್ ಕಿಶನ್ 16 ಎಸೆತಗಳಲ್ಲಿ ಕೇವಲ 20 ರನ್ ಗಳಿಸಿದರು. ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಆಟ ಉತ್ತಮವಾಗಿರಲಿಲ್ಲ. 77 ಕ್ಕೆ 6 ವಿಕೆಟ್ ಕಳೆದುಕೊಂಡಿದ್ದ ಟೀಮ್ ಇಂಡಿಯಾ ಸೂರ್ಯಕುಮಾರ್ 49 ಎಸೆತಗಳಲ್ಲಿ ಅಜೇಯ 84 ರನ್ ಗಳಿಸಿ ಭಾರತವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 161 ರನ್‌ಗಳಿಗೆ ಎಳೆದೊಯ್ದರು.