ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಭಾನುವಾರ ನಡೆಯಬೇಕಿದ್ದ ಪರೀಕ್ಷೆ ದಿಢೀರ್ ಮುಂದೂಡಿದ ಸರ್ಕಾರ | TET question paper leak

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮುಂಬೈ: ಶಿಕ್ಷಕರ ಅರ್ಹತಾ ಪರೀಕ್ಷೆ(TET question paper leak)ಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾನುವಾರ(ಜೂ. 28) ನಡೆಯಬೇಕಿದ್ದ ಟಿಇಟಿ ಪರೀಕ್ಷೆಯನ್ನು ದಿಢೀರ್ ರದ್ದು ಮಾಡಿ, ಮುಂದೂಡಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಶಿಕ್ಷಣ ಇಲಾಖೆ, ಘಟನೆಯ ಬಗ್ಗೆ ವಿವರವಾದ ಪತ್ರಿಕಾ ಪ್ರಕಟಣೆಯನ್ನು ಶಿಕ್ಷಣ ಇಲಾಖೆ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಬಳಿಕ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಿದೆ.
ಇನ್ನೂ ಪರೀಕ್ಷೆ ನಡೆಯಬೇಕಿದ್ದ 24 ಗಂಟೆ ಮೊದಲು ಥಾಣೆಯಿಂದ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಥಾಣೆಯಲ್ಲಿ ಕಾರ್ಯಾಚರಣೆ ನಡೆಸಿ ಪ್ರಶ್ನೆಪತ್ರಿಕೆ ವಶಪಡಿಸಿಕೊಂಡಿದ್ದು, ಹಲವರನ್ನು ಬಂಧಿಸಿದ್ದಾರೆ. ಮತ್ತು ಅವರ ಗುರುತುಗಳನ್ನು ಇನ್ನೂ ಬಹಿರಂಗ ಪಡಿಸಿಲ್ಲ ಎನ್ನಲಾಗಿದೆ.
ಪ್ರಶ್ನೆಪತ್ರಿಕೆ ಹೇಗೆ ಸೋರಿಕೆಯಾಯಿತು ಮತ್ತು ಆಪಾದಿತ ದಂಧೆಯಲ್ಲಿ ಇನ್ನೂ ಹೆಚ್ಚಿನ ಜನರು ಭಾಗಿಯಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net