ಸರ್ಕಾರ ರಚಿಸಲು ಕಾಂಗ್ರೆಸ್ ಬೆಂಬಲ ಕೋರಿದ ದಳಪತಿ ವಿಜಯ್; ನಾಳೆ ಚೆನ್ನೈನಲ್ಲಿ ಕಾಂಗ್ರೆಸ್ ಬೆಂಬಲ ಘೋಷಣೆ ಸಾಧ್ಯತೆ | Thalapathy Vijay
ರಾಹುಲ್ ಗಾಂಧಿ ಮತ್ತು ದಳಪತಿ ವಿಜಯ್
Published on:
Copied
Follow Us
ನವದೆಹಲಿ: ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳನ್ನು ಹಿಂದಿಕ್ಕಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ದಳಪತಿ ವಿಜಯ್ ನೇತೃತ್ವದ ಟಿವಿಕೆ, ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಕಾಂಗ್ರೆಸ್ಗೆ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ. ತಮಿಳುನಾಡು ಕಾಂಗ್ರೆಸ್ ಘಟಕವು ನಾಳೆ ಚೆನ್ನೈನಲ್ಲಿ ಸಭೆ ಸೇರಿ ಈ ವಿಷಯದ ಬಗ್ಗೆ ನಿರ್ಣಯ ತೆಗೆದುಕೊಳ್ಳಲಿದೆ. ಜಾತ್ಯತೀತ ಸರ್ಕಾರಕ್ಕೆ ಜನಾದೇಶ ಸ್ಪಷ್ಟವಾಗಿರುವುದರಿಂದ ಪಕ್ಷವು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಕಾಂಗ್ರೆಸ್ ಹೈಕಮಾಂಡ್ ಟಿವಿಕೆಗೆ ಬೆಂಬಲಿಸುವ ನಿರ್ಧಾರವನ್ನು ರಾಜ್ಯ ಘಟಕಕ್ಕೆ ನೀಡಿದೆ ಎನ್ನಲಾಗಿದೆ. ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಗಿರೀಶ್ ಚೋಡಂಕರ್, ವಿಜಯ್ ಅವರು ಬೆಂಬಲ ಕೋರಿ ಕಾಂಗ್ರೆಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ ಎಂದು ದೃಢಪಡಿಸಿದ್ದಾರೆ.
ತಮಿಳುನಾಡಿನ 234 ಸದಸ್ಯ ಬಲದ ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿಲ್ಲ. ಮ್ಯಾಜಿಕ್ ನಂಬರ್ 118. ಟಿವಿಕೆ ಪಕ್ಷವು 108 ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿದೆ. ಬಹುಮತ ಸಿಗದ ಕಾರಣ ಹೊರಗಿನ ಪಕ್ಷಗಳ ಬೆಂಬಲ ಕೋರಿದೆ (ಏಜೆನ್ಸೀಸ್).